1 Corinthians 7:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ಮಗಳ (ಕನ್ನಿಕೆಯ) ಮದುವೆಯ ವಯಸ್ಸು ಮೀರಿ ಹೋಗುವಂತೆ ಬಿಟ್ಟುಕೊಡುವುದು ಒಳ್ಳೆಯದಲ್ಲವೆಂದೂ, ಆಕೆಗೆ ಮದುವೆ ಮಾಡಿಸುವುದು ಅವಶ್ಯಕವೆಂದೂ ಒಬ್ಬನು ಭಾವಿಸಿದರೆ, ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲಿ. ಅವನು ಅವರಿಗೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವುದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಯ ಪ್ರಾಯ ಕಳೆದುಹೋಗುತ್ತದಲ್ಲಾ ಮದುವೆಮಾಡುವುದು ಅವಶ್ಯವೆಂದು ಅವನಿಗೆ ತೋರಿದರೆ ತನ್ನಿಷ್ಟದಂತೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ.
Kannada BSI Bible 2016
ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದು ಹೋಗುತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ. ಅವನು ಪಾಪಮಾಡುವದಿಲ್ಲ, ಮದುವೆ ಮಾಡಿಕೊಡಲಿ.
Kannada Bible (KNCL) BSI 2016
ಒಬ್ಬನು ತನಗೆ ನಿಶ್ಚಿತವಾದ ಕನ್ಯೆಯೊಡನೆ ಅನುಚಿತ ರೀತಿಯಲ್ಲಿ ವರ್ತಿಸುತ್ತಿರಬಹುದು; ಅವನಿಗೆ ಸಂಯಮ ತಪ್ಪುವಂತಿದ್ದರೆ, ತಾನು ಆಶಿಸುವಂತೆ ಅವನು ಮದುವೆಮಾಡಿಕೊಳ್ಳಲಿ, ಅದು ಪಾಪವಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವುದು ಮರ್ಯಾದೆಯಿಲ್ಲವೆಂದು ಭಾವಿಸಿದರೆ, ಆಕೆಗೆ ಪ್ರಾಯ ಕಳೆದು ಹೋಗುತ್ತಿದ್ದರೆ, ಮದುವೆಯಾಗುವುದು ಅವಶ್ಯವೆಂದು ಅವನಿಗೆ ಕಂಡರೆ, ತನ್ನಿಷ್ಟದಂತೆ ಮಾಡಲಿ. ಇದರಿಂದ ಅವನು ಪಾಪಮಾಡುವುದಿಲ್ಲ, ಮದುವೆ ಮಾಡಿಕೊಡಲಿ.