1 Corinthians 7:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಮತ್ತೊಬ್ಬನು ಮದುವೆಯ ಅಗತ್ಯವಿಲ್ಲವೆಂದು ತನ್ನ ಮನಸ್ಸಿನಲ್ಲಿ ದೃಢವಾಗಿ ನಿಶ್ಚಯಿಸಿಕೊಂಡಿದ್ದರೆ ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲು ಸ್ವತಂತ್ರನಾಗಿದ್ದಾನೆ. ಅವನು ತನ್ನ ಮಗಳಿಗೆ ಮದುವೆ ಮಾಡುವುದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಧರಿಸಿದ್ದರೆ ಅವನು ಒಳ್ಳೆಯದನ್ನೇ ಮಾಡುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವುದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲವೆಂದು ತನ್ನೊಳಗೆ ನಿರ್ಣಯಿಸಿ ಕೊಂಡರೆ ಅವನು ಹಾಗೆಯೇ ಮಾಡುವುದು ಒಳ್ಳೆಯದು.
Kannada BSI Bible 2016
ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವದಿಲ್ಲವೆಂದು ತನ್ನೊಳಗೆ ನಿರ್ಣಯಿಸಿಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು.
Kannada Bible (KNCL) BSI 2016
ಆದರೆ ಅವನು ಯಾರ ಒತ್ತಾಯಕ್ಕೂ ಮಣಿಯದೆ ದೃಢಚಿತ್ತನಾಗಿದ್ದು, ತನಗೆ ನಿಶ್ಚಿತಳಾದ ಕನ್ಯೆಯೊಡನೆ ಮದುವೆಯಾಗುವುದು ಬೇಡವೆಂದು ತೀರ್ಮಾನಿಸಿಕೊಂಡರೆ ಮತ್ತು ತನ್ನ ಸಂಯಮವನ್ನು ಹತೋಟಿಯಲ್ಲಿಟ್ಟುಕೊಂಡಿದ್ದರೆ ಅವನು ಅಂತೆಯೇ ಮಾಡಲಿ. ಹೀಗೆ, ಮದುವೆ ಆಗದೆ ಇರುವುದು ಒಳ್ಳೆಯದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ, ತನ್ನಿಷ್ಟವನ್ನು ನಡೆಸುವುದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲವೆಂದು ತನ್ನೊಳಗೆ ನಿರ್ಣಯಿಸಿಕೊಂಡರೆ, ಅವನು ಹಾಗೆ ಮಾಡುವುದು ಒಳ್ಳೆಯದು.