1 Corinthians 7:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಂಡನು ಬದುಕಿರುವ ತನಕ ಹೆಂಡತಿಯು ಅವನೊಂದಿಗೆ ಬಾಳ್ವೆ ನಡೆಸಬೇಕು. ಆದರೆ ಗಂಡನು ಸತ್ತುಹೋದರೆ, ಆ ಸ್ತ್ರೀಯು ತಾನು ಬಯಸಿದವರನ್ನು ಮದುವೆಯಾಗಲು ಸ್ವತಂತ್ರಳಾಗಿದ್ದಾಳೆ. ಆದರೆ ಅವನು ಪ್ರಭುವನ್ನು ಅನುಸರಿಸುವವನಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುತೈದೆಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಮರಣಹೊಂದಿದ್ದರೆ ಆಕೆಯು ಬೇಕಾದವನನ್ನು ಮದುವೆಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಕರ್ತನಲ್ಲಿ ವಿಶ್ವಾಸಿಯಾದವನನ್ನು ಮಾತ್ರ ಆಗಬೇಕು.
Kannada BSI Bible 2016
ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮುತ್ತೈದೆಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳುವದಕ್ಕೆ ಸ್ವತಂತ್ರಳಾಗಿದ್ದಾಳೆ.
Kannada Bible (KNCL) BSI 2016
ಪತಿ ಬದುಕಿರುವವರೆಗೂ ಸತಿ ಅವನಿಗೆ ಬಂಧಿತಳು. ಅವನು ಸತ್ತರೆ ತಾನು ಇಷ್ಟಪಟ್ಟವನನ್ನು ಮತ್ತೆ ಮದುವೆ ಆಗಲು ಸ್ವತಂತ್ರಳು. ಆದರೆ ಅವನು ಕ್ರೈಸ್ತವಿಶ್ವಾಸಿಯಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಂಡತಿಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಸತ್ತಿದ್ದರೆ, ಆಕೆಯು ತನಗೆ ಬೇಕಾದವನನ್ನು ಮದುವೆ ಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಆ ವ್ಯಕ್ತಿಯು ಕರ್ತ ದೇವರಲ್ಲಿ ವಿಶ್ವಾಸಿಯಾಗಿರಬೇಕು.