1 Corinthians 7:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಆಕೆಯ ಗಂಡನಿಗೆ ಆಕೆಯ ದೇಹದ ಮೇಲೆ ಅಧಿಕಾರವಿದೆ. ಅದೇರೀತಿ, ಗಂಡನಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಅವನ ಹೆಂಡತಿಗೆ ಅವನ ದೇಹದ ಮೇಲೆ ಅಧಿಕಾರವಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು.
Kannada BSI Bible 2016
ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಅದು ಹೆಂಡತಿಗುಂಟು.
Kannada Bible (KNCL) BSI 2016
ಸತಿಗೆ ತನ್ನ ದೇಹದ ಮೇಲೆ ಅಧಿಕಾರವಿಲ್ಲ. ಆದರೆ ಪತಿಗೆ ಆ ಅಧಿಕಾರವಿದೆ. ಪತಿಗೆ ತನ್ನ ದೇಹದ ಮೇಲೆ ಅಧಿಕಾರವಿಲ್ಲ, ಆದರೆ ಸತಿಗೆ ಆ ಅಧಿಕಾರವಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಂಡತಿಯ ಸ್ವಂತ ದೇಹದ ಮೇಲೆ ಆಕೆಗೆ ಅಧಿಕಾರವಿಲ್ಲ, ಅದು ಗಂಡನಿಗಿದೆ. ಹಾಗೆಯೇ, ಗಂಡನ ಸ್ವಂತ ದೇಹದ ಮೇಲೆ ಅವನಿಗೆ ಅಧಿಕಾರವಿಲ್ಲ, ಅದು ಅವನ ಹೆಂಡತಿಗಿದೆ.