1 Corinthians 7:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಕೆಯು ಮತ್ತೆ ಮದುವೆ ಮಾಡಿಕೊಳ್ಳದಿದ್ದರೆ ಹೆಚ್ಚು ಸಂತೋಷದಿಂದಿರುವಳು. ಇದು ನನ್ನ ಅಭಿಪ್ರಾಯವಾಗಿದೆ. ದೇವರಾತ್ಮನು ನನ್ನೊಳಗಿದ್ದಾನೆಂದು ನಾನು ನಂಬುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಮದುವೆಮಾಡಿಕೊಳ್ಳದೆ ಹಾಗೆ ಇರುವುದು ಆಕೆಗೆ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರ ಆತ್ಮವುಂಟೆಂದು ಭಾವಿಸುತ್ತೇನೆ.
Kannada BSI Bible 2016
ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಈ ಕಾರ್ಯವು ಕರ್ತನ ಶಿಷ್ಯರಿಗೆ ತಕ್ಕಂತೆ ನಡೆಯಲಿ. ಆದರೂ ಮದುವೆ ಮಾಡಿಕೊಳ್ಳುವದಕ್ಕಿಂತಲೂ ಇದ್ದ ಹಾಗೆಯೇ ಇರುವದು ಆಕೆಗೆ ಸುಖವೆಂದು ನನ್ನ ಅಭಿಪ್ರಾಯ; ನನಗೂ ದೇವರ ಆತ್ಮವುಂಟೆಂದು ನೆನಸುತ್ತೇನೆ.
Kannada Bible (KNCL) BSI 2016
ಆಕೆ ವಿವಾಹವಾಗದೆ ಹಾಗೇ ಉಳಿದರೆ ಹೆಚ್ಚು ಭಾಗ್ಯವಂತಳು. ಇದು ನನ್ನ ಅಭಿಪ್ರಾಯ. ಆದರೂ ದೇವರ ಆತ್ಮದ ಪ್ರೇರಣೆಯಿಂದ ಇದನ್ನು ಹೇಳುತ್ತಿದ್ದೇನೆ, ಎಂಬುದೇ ನನ್ನ ನಂಬಿಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆ ಮದುವೆ ಮಾಡಿಕೊಳ್ಳದೆ ಇರುವುದು ಬಹಳ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರಾತ್ಮ ಇರುವುದಾಗಿ ಭಾವಿಸುತ್ತೇನೆ.