1 Corinthians 7:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಗಂಡ ಮತ್ತು ಹೆಂಡತಿ ಒಬ್ಬರಿಗೊಬ್ಬರು ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಅವರು ತಮ್ಮ ಸಮಯವನ್ನು ಪ್ರಾರ್ಥನೆಯಲ್ಲಿ ವಿನಿಯೋಗಿಸುವುದಕ್ಕಾಗಿ ಸ್ವಲ್ಪಕಾಲ ಲೈಂಗಿಕ ಸಂಬಂಧದಿಂದ ದೂರವಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿಯಿರಬೇಕು. ಬಳಿಕ ಮತ್ತೆ ಒಂದಾಗಬೇಕು, ಇಲ್ಲವಾದರೆ ನಿಮ್ಮ ಬಲಹೀನತೆಯನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋಧಿಸಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ.
Kannada BSI Bible 2016
ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ದಂಪತಿ ಧರ್ಮವನ್ನು ಬಿಟ್ಟು ಅಗಲಿರಬಹುದೇ ಹೊರತು ಅನ್ಯಥಾ ಹಾಗೆ ಮಾಡಬಾರದು; ಆಮೇಲೆ ಸೈತಾನನು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ನಿಮಗೆ ದುಷ್ಪ್ರೇರಣೆಮಾಡದಂತೆ ತಿರಿಗಿ ಕೂಡಿಕೊಳ್ಳಿರಿ.
Kannada Bible (KNCL) BSI 2016
ಆದುದರಿಂದ ಸತಿಪತಿಯರು ಒಬ್ಬರಿಗೊಬ್ಬರು ದಾಂಪತ್ಯಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಧ್ಯಾನ, ಪ್ರಾರ್ಥನೆಗಳಲ್ಲಿ ನಿರತರಾಗಿರಲು, ಸ್ವಲ್ಪಕಾಲ ಒಬ್ಬರನ್ನೊಬ್ಬರು ಅಗಲಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿ ಇರಬೇಕು. ಅನಂತರ ಒಂದುಗೂಡಬೇಕು. ಇಲ್ಲದೆ ಹೋದರೆ, ನಿಮ್ಮಲ್ಲಿ ಸಂಯಮ ಇಲ್ಲದಿರುವುದನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋದಿಸಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಂಡ ಹೆಂಡತಿ ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ಪ್ರಾರ್ಥನೆಗಾಗಿ ಅಗಲಿರಬಹುದಷ್ಟೇ. ಇಲ್ಲದಿದ್ದರೆ, ಸೈತಾನನು ನಿಮ್ಮ ಸಂಯಮ ಇಲ್ಲದಿರುವುದನ್ನು ನೋಡಿ ನಿಮ್ಮನ್ನು ಶೋಧಿಸದಂತೆ ಒಂದುಗೂಡಬೇಕು.