1 Corinthians 7:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಅವರು ತಮ್ಮ ದೇಹಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲಾಗದಿದ್ದರೆ, ಅವರು ಮದುವೆಯಾಗಬೇಕು. ಲೈಂಗಿಕ ಆಸೆಯಿಂದ ಬೆಂದು ಹೋಗುವುದಕ್ಕಿಂತಲೂ ಮದುವೆ ಮಾಡಿಕೊಳ್ಳುವುದೇ ಉತ್ತಮವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸಂಯಮಯಿಲ್ಲದವರಾದರೆ ಮದುವೆಮಾಡಿಕೊಳ್ಳಲಿ. ಯಾಕೆಂದರೆ ಕಾಮತಾಪಪಡುವುದಕ್ಕಿಂತ ಮದುವೆಮಾಡಿಕೊಳ್ಳುವುದು ಉತ್ತಮ.
Kannada BSI Bible 2016
ಅವರು ದಮೆಯಿಲ್ಲದವರಾದರೆ ಮದುವೆ ಮಾಡಿಕೊಳ್ಳಲಿ; ತಾಪಪಡುವದಕ್ಕಿಂತ ಮದುವೆಮಾಡಿ ಕೊಳ್ಳುವದು ಉತ್ತಮ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ದಮೆಯಿಲ್ಲದವರಾದರೆ ಮದುವೆಮಾಡಿಕೊಳ್ಳಲಿ; ಕಾಮತಾಪ ಪಡುವದಕ್ಕಿಂತ ಮದುವೆಮಾಡಿಕೊಳ್ಳುವದು ಉತ್ತಮವಷ್ಟೆ.
Kannada Bible (KNCL) BSI 2016
ಅವರಿಗೆ ಸಂಯಮ ಇಲ್ಲದಿದ್ದರೆ ಮದುವೆಮಾಡಿಕೊಳ್ಳಲಿ. ಕಾಮತಾಪದಿಂದ ಬೆಂದುಹೋಗುವುದಕ್ಕಿಂತ ಮದುವೆಮಾಡಿಕೊಳ್ಳುವುದೇ ಲೇಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ ಸ್ವಯಂನಿಯಂತ್ರಣ ಇಲ್ಲದಿದ್ದರೆ, ಮದುವೆಮಾಡಿಕೊಳ್ಳಲಿ, ಕಾಮದಾಶೆ ಪಡುವುದಕ್ಕಿಂತ ಮದುವೆ ಮಾಡಿಕೊಳ್ಳುವುದು ಉತ್ತಮ.