1 Corinthians 8:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.
Kannada BSI Bible 2016
ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳ ವಿಷಯದಲ್ಲಿ ಈಗ ನೋಡೋಣ. ನಮ್ಮೆಲ್ಲರಿಗೆ ಜ್ಞಾನವುಂಟೆಂದು ಬಲ್ಲೆವು. ಜ್ಞಾನವು ಉಬ್ಬಿಸುತ್ತದೆ, ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.
Kannada Bible (KNCL) BSI 2016
ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ಎಂದು ಹೇಳಿಕೊಳ್ಳುತ್ತೀರಿ. ಜ್ಞಾನವು ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುತ್ತದೆ. ಪ್ರೀತಿಯಾದರೋ ಭಕ್ತಿಯನ್ನು ವೃದ್ಧಿಗೊಳಿಸುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ವಿಗ್ರಹಕ್ಕೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳ ವಿಷಯ: “ನಮ್ಮೆಲ್ಲರಿಗೂ ತಿಳುವಳಿಕೆಯಿದೆ,” ಎಂದು ಬಲ್ಲೆವು. ತಿಳುವಳಿಕೆಯು ಅಹಂಕಾರಿಗಳನ್ನಾಗಿ ಮಾಡುತ್ತದೆ. ಆದರೆ ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.