1 Corinthians 8:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ನಿಮ್ಮ ಸಹೋದರ ಸಹೋದರಿಯರಿಗೆ ವಿರೋಧವಾಗಿ ಪಾಪ ಮಾಡುವಾಗ ಮತ್ತು ಅವರು ತಪ್ಪೆಂದು ಭಾವಿಸುವ ಕಾರ್ಯಗಳನ್ನು ಮಾಡುವಂತೆ ಅವರನ್ನು ಪ್ರೋತ್ಸಾಹಿಸಿ ಅವರಿಗೆ ಕೇಡನ್ನು ಉಂಟುಮಾಡುವಾಗ ನೀವು ಕ್ರಿಸ್ತನಿಗೆ ವಿರೋಧವಾಗಿಯೂ ಪಾಪ ಮಾಡುವವರಾಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ ಅವರ ದುರ್ಬಲವಾದ ಮನಸ್ಸಾಕ್ಷಿಯನ್ನು ನೋಯಿಸಿದರೆ ನೀವು ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ.
Kannada BSI Bible 2016
ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಸಹೋದರರಿಗೆ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ಪಾಪಮಾಡುವವರಾಗುತ್ತೀರಿ.
Kannada Bible (KNCL) BSI 2016
ಹೀಗೆ ನೀವು ನಿಮ್ಮ ಸಹೋದರರ ದುರ್ಬಲ ಮನಸ್ಸಾಕ್ಷಿಯನ್ನು ನೋಯಿಸಿ, ಅವರ ವಿರುದ್ಧ ಪಾಪ ಕಟ್ಟಿಕೊಳ್ಳುವುದರಿಂದ ಯೇಸುಕ್ರಿಸ್ತರ ವಿರುದ್ಧವೇ ಪಾಪಮಾಡುತ್ತೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ನಿನ್ನ ಸಹೋದರರ ವಿರುದ್ಧ ಪಾಪಮಾಡಿ, ಬಲಹೀನವಾದ ಅವರ ಮನಸ್ಸನ್ನು ನೋಯಿಸಿ, ಕ್ರಿಸ್ತ ಯೇಸುವಿಗೆ ವಿರುದ್ಧವಾಗಿ ಪಾಪಮಾಡುವವನಾಗಿರುತ್ತಿ.