1 Corinthians 8:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗಿರಲಾಗಿ, ನಾನು ತಿನ್ನುವ ಆಹಾರವು ನನ್ನ ಸಹೋದರನನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ. ನನ್ನ ಸಹೋದರನ ಪಾಪಕ್ಕೆ ನಾನು ಕಾರಣನಾಗಬಾರದೆಂದು ನಾನು ಮಾಂಸ ತಿನ್ನುವುದನ್ನು ನಿಲ್ಲಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ.
Kannada BSI Bible 2016
ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಭೋಜನಪದಾರ್ಥದಿಂದ ನನ್ನ ಸಹೋದರನಿಗೆ ವಿಘ್ನವಾಗುವದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವದಿಲ್ಲ; ನಾನು ನನ್ನ ಸಹೋದರನಿಗೆ ವಿಘ್ನವನ್ನುಂಟುಮಾಡಬಾರದಲ್ಲಾ.
Kannada Bible (KNCL) BSI 2016
ನಾನು ತಿನ್ನುವ ಆಹಾರ ನನ್ನ ಸಹೋದರನ ವಿಶ್ವಾಸಕ್ಕೆ ಅಡ್ಡಿಯಾಗುವುದಾದರೆ ಎಂದಿಗೂ ನಾನದನ್ನು ತಿನ್ನಲಾರೆ, ಅವನ ವಿಶ್ವಾಸಕ್ಕೆ ಅಡ್ಡಿಯನ್ನು ತರಲಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾನು ತಿನ್ನುವಂಥದ್ದು ನನ್ನ ಸಹೋದರನನ್ನು ಪಾಪದಲ್ಲಿ ಬೀಳುವಂತೆ ಮಾಡುವುದಾದರೆ, ಎಂದಿಗೂ ನಾನು ಮಾಂಸವನ್ನು ತಿನ್ನುವುದೇ ಇಲ್ಲ. ಅವನ ಬೀಳುವಿಕೆಗೆ ಕಾರಣವಾಗುವುದೂ ಇಲ್ಲ.