1 Corinthians 8:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.
Kannada BSI Bible 2016
ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದರ ವಿಷಯದಲ್ಲಿ ನಾನು ಹೇಳುವದೇನಂದರೆ - ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ಬಲ್ಲೆವು.
Kannada Bible (KNCL) BSI 2016
ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೆ, ವಿಗ್ರಹಗಳಿಗೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳನ್ನು ತಿನ್ನುವುದರ ವಿಷಯ: “ಲೋಕದಲ್ಲಿ ವಿಗ್ರಹವು ಏನೂ ಅಲ್ಲ. ಒಬ್ಬ ದೇವರೇ ಹೊರತು ಬೇರೆ ದೇವರಿಲ್ಲ,” ಎಂದು ನಮಗೆ ಗೊತ್ತಿದೆ.