1 Corinthians 8:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಎಲ್ಲಾ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಕೆಲವು ಜನರು ಇಂದಿನವರೆಗೂ ವಿಗ್ರಹಗಳನ್ನು ಆರಾಧಿಸುವ ರೂಢಿಯಲ್ಲಿದ್ದಾರೆ. ಹೀಗಿರಲಾಗಿ, ಆ ಜನರು ಮಾಂಸವನ್ನು ತಿನ್ನುವಾಗ ಅದು ವಿಗ್ರಹಕ್ಕೆ ಅರ್ಪಿತವಾದದ್ದೆಂದು ಆಲೋಚಿಸುತ್ತಾರೆ. ಆದರೆ ಈ ಮಾಂಸವನ್ನು ತಿನ್ನುವುದು ತಪ್ಪಲ್ಲ ಎಂಬ ದೃಢನಂಬಿಕೆ ಅವರಲ್ಲಿಲ್ಲ. ಆದ್ದರಿಂದ, ಅವರು ಮಾಂಸವನ್ನು ತಿನ್ನುವಾಗ ತಮ್ಮನ್ನು ದೋಷಿಗಳೆಂದು ಭಾವಿಸಿಕೊಳ್ಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ.
Kannada BSI Bible 2016
ಆದರೆ ಆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಈ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈ ವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಕ್ಕೆ ನೈವೇದ್ಯ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿದ್ದು ಕಲೆಯನ್ನು ಹೊಂದುತ್ತದೆ.
Kannada Bible (KNCL) BSI 2016
ಆದರೆ ಎಲ್ಲರಿಗೂ ಇದರ ಅರಿವಿಲ್ಲ. ಕೆಲವರು ಸಾಂಪ್ರದಾಯಕವಾಗಿ ಬಂದ ವಿಗ್ರಹಾರಾಧನೆಯಲ್ಲಿ ಭಾಗವಹಿಸಿ, ವಿಗ್ರಹಕ್ಕೆ ಅರ್ಪಿತವಾದ ನೈವೇದ್ಯಪದಾರ್ಥವನ್ನು ತಿನ್ನುತ್ತಾರೆ. ಆದರೆ ಅವರ ಮನಸ್ಸಾಕ್ಷಿ ದುರ್ಬಲವಾಗಿರುವುದರಿಂದ ತಾವು ಕಲುಷಿತರಾದೆವೆಂದು ಭಾವಿಸಿಕೊಳ್ಳುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈ ತಿಳುವಳಿಕೆಯು ಎಲ್ಲರಲ್ಲಿಯೂ ಇಲ್ಲ. ಕೆಲವರು ಇದುವರೆಗೂ ವಿಗ್ರಹಕ್ಕೆ ಅರ್ಪಿತವಾದದ್ದನ್ನು ತಿನ್ನುವ ರೂಢಿಯಲ್ಲಿದ್ದು, ಅವರು ವಿಗ್ರಹಕ್ಕೆ ನೈವೇದ್ಯ ಮಾಡಿ ತಿನ್ನುವುದಾಗಿ ಭಾವಿಸಿಕೊಳ್ಳುತ್ತಾರೆ. ಹೀಗೆ ಅವರ ಮನಸ್ಸಾಕ್ಷಿ ಬಲಹೀನವಾಗಿರುವುದರಿಂದ, ಅದು ಅಶುದ್ಧವಾಗಿರುತ್ತದೆ.