1 Corinthians 9:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಮಗೆ ಅಗತ್ಯವಾದುವುಗಳನ್ನು ನಿಮ್ಮಿಂದ ಪಡೆದುಕೊಳ್ಳಲು ಇತರರಿಗೆ ಹಕ್ಕಿದೆ. ಆದ್ದರಿಂದ ಖಂಡಿತವಾಗಿ ನಮಗೂ ಈ ಹಕ್ಕಿದೆ. ಆದರೆ ನಾವು ಈ ಹಕ್ಕನ್ನು ಉಪಯೋಗಿಸುವುದಿಲ್ಲ. ಕ್ರಿಸ್ತನ ಸುವಾರ್ತೆಗೆ ವಿಧೇಯರಾಗಲು ಯಾರಿಗೂ ತೊಂದರೆ ಆಗಕೂಡದೆಂದು ನಾವು ಪ್ರತಿಯೊಂದನ್ನು ಸಹಿಸಿಕೊಳ್ಳುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ? ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು.
Kannada BSI Bible 2016
ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಹಕ್ಕು ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಹಕ್ಕನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು.
Kannada Bible (KNCL) BSI 2016
ಇತರರಿಗೆ ನಿಮ್ಮ ಮೇಲೆ ಇಂಥ ಹಕ್ಕಿದ್ದರೆ ಅದಕ್ಕಿಂತಲೂ ಹೆಚ್ಚು ಹಕ್ಕು ನಮಗಿರಬೇಕಲ್ಲವೇ? ಆದರೂ ನಾವು ಈ ಹಕ್ಕನ್ನು ಚಲಾಯಿಸಲೇ ಇಲ್ಲ. ಬದಲಿಗೆ, ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯಾವ ಅಡ್ಡಿಯೂ ಬಾರದಿರಲೆಂದು ಎಲ್ಲವನ್ನು ಸಹಿಸಿಕೊಂಡೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇತರರಿಗೆ ನಿಮ್ಮ ಸಹಾಯದಲ್ಲಿ ಪಾಲು ಇದ್ದರೆ, ಅದರಲ್ಲಿ ನಮಗೂ ಹೆಚ್ಚು ಪಾಲು ಇರಬೇಕಲ್ಲಾ? ಆದರೆ ನಾವು ಈ ಅಧಿಕಾರವನ್ನು ಚಲಾಯಿಸಿಲ್ಲ. ಕ್ರಿಸ್ತ ಯೇಸುವಿಗೆ ಸೇರಿದ ಸುವಾರ್ತೆಗೆ ಅಡ್ಡಿಯಾಗಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು.