1 Corinthians 9:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಾಲಯದಲ್ಲಿ ಸೇವೆಮಾಡುವ ಜನರು ದೇವಾಲಯದಿಂದಲೇ ತಮ್ಮ ಆಹಾರವನ್ನು ಪಡೆದುಕೊಳ್ಳುತ್ತಾರೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಯಜ್ಞವೇದಿಕೆಯ ಬಳಿ ಸೇವೆ ಮಾಡುವವರು ಯಜ್ಞವೇದಿಕೆಯ ಮೇಲೆ ಅರ್ಪಿತವಾದದ್ದರಲ್ಲಿ ಸ್ವಲ್ಪಭಾಗವನ್ನು ಪಡೆದುಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?
Kannada BSI Bible 2016
ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಾಲಯದ ಊಳಿಗವನ್ನು ನಡಿಸುವವರು ದೇವಾಲಯದ ಆದಾಯದಿಂದ ಊಟಮಾಡುತ್ತಾರೆಂಬದೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬದೂ ನಿಮಗೆ ತಿಳಿಯದೋ?
Kannada Bible (KNCL) BSI 2016
ದೇವಾಲಯದ ಸೇವೆಯಲ್ಲಿರುವವರು ದೇವಾಲಯದ ಆದಾಯದಿಂದ ಜೀವಿಸುತ್ತಾರೆ. ಬಲಿಪೀಠದ ಬಳಿ ಸೇವೆಮಾಡುವವರು ಅರ್ಪಿತವಾದ ಬಲಿಯಿಂದ ಪಾಲನ್ನು ಪಡೆಯುತ್ತಾರೆ. ಇದು ನಿಮಗೆ ತಿಳಿದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವಾಲಯದಲ್ಲಿ ಸೇವೆಮಾಡುವವರು, ದೇವಾಲಯದಲ್ಲಿ ಊಟ ಪಡೆಯುತ್ತಾರೆಂಬುದೂ; ಬಲಿಪೀಠದ ಬಳಿಯಲ್ಲಿ ಸೇವೆಮಾಡುವವರು, ಆ ಬಲಿಪೀಠದ ಮೇಲೆ ಸಮರ್ಪಿಸಿದ್ದರಲ್ಲಿ ಪಾಲು ಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?