1 Corinthians 9:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸುವಾರ್ತೆಯನ್ನು ಬೋಧಿಸುವ ಜನರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸುವಾರ್ತೆಯನ್ನು ಬೋಧಿಸುವವರು ತಮಗೆ ಅಗತ್ಯವಾದುವುಗಳನ್ನು ಈ ಸೇವೆಯ ಮೂಲಕ ಪಡೆದುಕೊಳ್ಳಬೇಕೆಂದು ಪ್ರಭುವು ಆಜ್ಞಾಪಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ.
Kannada BSI Bible 2016
ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ನೇವಿುಸಿದನು.
Kannada Bible (KNCL) BSI 2016
ಅದೇ ಪ್ರಕಾರ ಶುಭಸಂದೇಶ ಪ್ರಚಾರಕರು ಶುಭಸಂದೇಶ ಪ್ರಚಾರದ ಆದಾಯದಿಂದಲೇ ಜೀವನ ನಡೆಸಬೇಕೆಂದು ಪ್ರಭುವೇ ಆಜ್ಞಾಪಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು, ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ಕರ್ತದೇವರು ಸಹ ಆಜ್ಞಾಪಿಸಿದ್ದಾರೆ.