1 Corinthians 9:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ಉಪಯೋಗಿಸಲಿಲ್ಲ. ನನಗೆ ಅಗತ್ಯವಾದುವುಗಳನ್ನು ಪಡೆದುಕೊಳ್ಳುವುದಕ್ಕಾಗಿಯೂ ನಾನು ಪ್ರಯತ್ನಿಸುತ್ತಿಲ್ಲ. ನಿಮಗೆ ಇದನ್ನು ಬರೆಯುತ್ತಿರುವ ಉದ್ದೇಶವೂ ಅದಲ್ಲ. ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವನ್ನು ಕಳೆದುಕೊಳ್ಳುವುದಕ್ಕಿಂತ ಸಾಯುವುದೇ ನನಗೆ ಲೇಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಂತೂ ಇವುಗಳಲ್ಲಿ ಒಂದನ್ನೂ ಪಾಲಿಸಲಿಲ್ಲ. ನನಗೆ ಏನಾದರೂ ಸಿಕ್ಕಬೇಕೆಂಬ ಉದ್ದೇಶದಿಂದ ನಾನು ಇದನ್ನು ಬರೆಯುತ್ತಿಲ್ಲ. ಯಾರಾದರೂ ಈ ಹೊಗಳಿಕೆಯನ್ನು ವ್ಯರ್ಥಮಾಡುವುದಕ್ಕಿಂತ ಸಾಯುವುದೇ ನನಗೆ ಲೇಸು.
Kannada BSI Bible 2016
ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ನಡಿಸಲಿಲ್ಲ; ನನ್ನ ವಿಷಯದಲ್ಲಿಯೂ ಹೀಗಾಗಬೇಕೆಂದು ಈ ಸಂಗತಿಗಳನ್ನು ನಾನು ಬರೆಯಲಿಲ್ಲ. ಅದಕ್ಕಿಂತ ಸಾಯುವದೇ ನನಗೆ ಲೇಸು. ಹೊಗಳಿಕೊಳ್ಳುವದಕ್ಕೆ ನನಗಿರುವ ಈ ಆಸ್ಪದವನ್ನು ಯಾರೂ ತೆಗೆದುಬಿಡಬಾರದು.
Kannada Bible (KNCL) BSI 2016
ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ಚಲಾಯಿಸಲಿಲ್ಲ. ಚಲಾಯಿಸಬೇಕೆಂಬ ಉದ್ದೇಶದಿಂದಲೂ ಇದನ್ನು ಬರೆಯುತ್ತಿಲ್ಲ. ಅದಕ್ಕಿಂತಲೂ ಸಾಯುವುದೇ ಲೇಸು. ಈ ನನ್ನ ಹೆಮ್ಮೆಯನ್ನು ಯಾರೂ ಅಪಹರಿಸಲಾರರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನಂತೂ ಇವುಗಳಲ್ಲಿ ಒಂದು ಹಕ್ಕನ್ನೂ ಉಪಯೋಗಿಸಿಕೊಂಡಿಲ್ಲ. ಅಂಥವುಗಳನ್ನು ನನಗೆ ನೀವು ಮಾಡಬೇಕೆಂಬ ಅಪೇಕ್ಷೆಯಿಂದ ಈ ಸಂಗತಿಗಳನ್ನು ನಾನು ಬರೆಯಲಿಲ್ಲ. ಯಾರಾದರೂ ಈ ಹೆಮ್ಮೆಯನ್ನು ನನ್ನಿಂದ ಅಪಹರಿಸುವುದಕ್ಕಿಂತಲೂ ಸಾಯುವುದೇ ಲೇಸು.