1 Corinthians 9:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನನ್ನ ಸ್ವಂತ ಇಷ್ಟದಿಂದ ಸುವಾರ್ತೆಯನ್ನು ಬೋಧಿಸುವುದಾಗಿದ್ದರೆ, ಬಹುಮಾನಕ್ಕೆ ಅರ್ಹನಾಗಿದ್ದೇನೆ. ಆದರೆ ಬೇರೊಂದನ್ನು ಆರಿಸಿಕೊಳ್ಳಲು ನನಗೆ ಅವಕಾಶವೇ ಇಲ್ಲ. ನಾನು ಸುವಾರ್ತೆಯನ್ನು ಸಾರಲೇಬೇಕು. ಇದು ನನಗೆ ಕೊಡಲ್ಪಟ್ಟಿರುವ ಕರ್ತವ್ಯವಷ್ಟೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ.
Kannada BSI Bible 2016
ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಬಹುಮಾನ ದೊರೆಯುವದು; ಮತ್ತೊಬ್ಬನ ಇಷ್ಟದಿಂದ ಮಾಡಿದರೆ ಮನೆವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
Kannada Bible (KNCL) BSI 2016
ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದ್ದರಿಂದ ಕರ್ತವ್ಯಬದ್ಧನಾಗಿ ಮಾಡುತ್ತಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಇಷ್ಟಪೂರ್ವಕವಾಗಿ ಸುವಾರ್ತೆ ಸಾರಿದರೆ, ನನಗೆ ಬಹುಮಾನವಿರುವುದು. ಇಷ್ಟವಿಲ್ಲದೆ ಮಾಡಿದರೆ, ನನ್ನ ವಶಕ್ಕೆ ಒಪ್ಪಿಸಲಾದ ಕಾರ್ಯಭಾರವನ್ನು ನಾನು ನೆರವೇರಿಸಿದಂತಾಗುತ್ತದೆ.