1 Corinthians 9:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗಿರಲು, ನನಗೆ ಯಾವ ಬಹುಮಾನ ಸಿಕ್ಕುವುದು? ಸುವಾರ್ತೆಯನ್ನು ಉಚಿತವಾಗಿ ಬೋಧಿಸುವುದೊಂದೇ ನನಗೆ ದೊರೆಯುವ ಬಹುಮಾನವಾಗಿದೆ. ಆದ್ದರಿಂದ ಸುವಾರ್ತೆಯನ್ನು ಸಾರುವಾಗ ಅದರಿಂದ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ.
Kannada BSI Bible 2016
ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ ನನಗಾಗುವ ಬಹುಮಾನವೇನು? ಸುವಾರ್ತೆಯನ್ನು ಸಾರುವಾಗ ಅದರಿಂದ ಜೀವನ ಮಾಡುವ ಹಕ್ಕನ್ನು ನಡಿಸದೆ ಅದನ್ನು ಉಚಿತಾರ್ಥವಾಗಿ ದಾನಮಾಡುವದೇ ನನಗೆ ಬಹುಮಾನ.
Kannada Bible (KNCL) BSI 2016
ಹಾಗಾದರೆ ನನಗೆ ಸಿಗುವ ಸಂಭಾವನೆಯಾದರೂ ಏನು? ಶುಭಸಂದೇಶವನ್ನು ಸಾರುವಾಗ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳದೆ ಉಚಿತವಾಗಿ ಸಾರುವ ಸೌಭಾಗ್ಯವೇ ನನ್ನ ಸಂಭಾವನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೆ ನನಗೆ ದೊರೆಯುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ, ಅದನ್ನು ಉಚಿತವಾಗಿ ಸಾರುತ್ತಾ, ಸುವಾರ್ತೆಯ ಪ್ರಸಂಗಿಯಾಗಿ ನನ್ನ ಪೂರ್ಣ ಹಕ್ಕನ್ನು ಉಪಯೋಗಿಸದಿರುವುದೇ ನನ್ನ ಬಹುಮಾನ.