1 Corinthians 9:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯರನ್ನು ರಕ್ಷಣಾಮಾರ್ಗಕ್ಕೆ ತರಲು ಅವರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಾಗಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ಅಧೀನರಾಗಿರುವ ಜನರನ್ನು ರಕ್ಷಣಾಮಾರ್ಗಕ್ಕೆ ತರಬೇಕೆಂದು ಧರ್ಮಶಾಸ್ತ್ರಕ್ಕೆ ಅಧೀನನಾದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು.
Kannada BSI Bible 2016
ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರನ್ನು ಸಂಪಾದಿಸಿಕೊಳ್ಳುವದಕ್ಕೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ನಿಯಮಗಳಿಗೆ ಅಧೀನನಲ್ಲದವನಾದರೂ ನಿಯಮಗಳಿಗೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವದಕ್ಕಾಗಿ ಅವರಿಗೆ ನಿಯಮಗಳಿಗೆ ಅಧೀನನಂತಾದೆನು.
Kannada Bible (KNCL) BSI 2016
ಯೆಹೂದ್ಯರನ್ನು ಗಳಿಸಿಕೊಳ್ಳಲು ಯೆಹೂದ್ಯರಿಗೆ ಯೆಹೂದ್ಯನಂತಾದೆ. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಗಳಿಸಿಕೊಳ್ಳಲು ನಾನು ಆ ಶಾಸ್ತ್ರಕ್ಕೆ ಅಧೀನನಲ್ಲದಿದ್ದರೂ ಅವರಿಗೋಸ್ಕರ ಅಧೀನನಂತಾದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ನಿಯಮಕ್ಕೆ ಅಧೀನನಲ್ಲದಿದ್ದರೂ ನಿಯಮಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವಂತೆ ಅವರಿಗಾಗಿ ನಿಯಮಕ್ಕೆ ಅಧೀನನಂತಾದೆನು.