1 Corinthians 9:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಧರ್ಮಶಾಸ್ತ್ರವಿಲ್ಲದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಧರ್ಮಶಾಸ್ತ್ರವಿಲ್ಲದ ವ್ಯಕ್ತಿಯಂತಾದೆನು. (ಆದರೆ ನಿಜವಾಗಿಯೂ, ನಾನು ಧರ್ಮಶಾಸ್ತ್ರವಿಲ್ಲದವನಲ್ಲ. ನಾನು ಕ್ರಿಸ್ತನ ಧರ್ಮಶಾಸ್ತ್ರಕ್ಕೆ ಅಧೀನನಾಗಿದ್ದೇನೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಧರ್ಮಶಾಸ್ತ್ರ ಬಾಹಿರನಂತಾದೆನು.
Kannada BSI Bible 2016
(ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ದೇವರ ನೇಮವಿಲ್ಲದವನಲ್ಲ, ಕ್ರಿಸ್ತ ನಿಯಮಕ್ಕೊಳಗಾದವನೇ; ಆದರೂ ನಿಯಮವಿಲ್ಲದವರನ್ನು ಸಂಪಾದಿಸಿಕೊಳ್ಳುವದಕ್ಕಾಗಿ ಅವರಿಗೆ ನಿಯಮವಿಲ್ಲದವನಂತಾದೆನು.
Kannada Bible (KNCL) BSI 2016
ಧರ್ಮಶಾಸ್ತ್ರಕ್ಕೆ ಬಾಹಿರರಾದವರನ್ನು ಗಳಿಸಿಕೊಳ್ಳಲು ನಾನು ಧರ್ಮಶಾಸ್ತ್ರಕ್ಕೆ ಬಾಹಿರನಂತೆ ಆದೆ. ಯೇಸುಕ್ರಿಸ್ತರ ನಿಯಮಕ್ಕೆ ನಾನು ವಿಧೇಯನಾದುದರಿಂದ ದೇವರ ನಿಯಮಕ್ಕೆ ನಾನು ಬಾಹಿರನೇನೂ ಅಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಯಮ ಇಲ್ಲದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೆ ನಿಯಮವಿಲ್ಲದವನಂತಾದೆನು. ನಾನು ಕ್ರಿಸ್ತ ಯೇಸುವಿನ ನಿಯಮಕ್ಕೆ ಒಳಗಾದವನಾಗಿದ್ದರೂ ನಾನು ದೇವರ ನಿಯಮದಿಂದ ಸ್ವತಂತ್ರವಾದವನಲ್ಲ.