1 Corinthians 9:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಲಹೀನರಾದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಬಲಹೀನನಂತಾದೆನು. ಯಾವ ರೀತಿಯಲ್ಲಾದರೂ ರಕ್ಷಣಾ ಮಾರ್ಗಕ್ಕೆ ನಡೆಸಬೇಕೆಂದು ಯಾರ್ಯಾರಿಗೆ ಎಂಥೆಂಥವನಾಗಬೇಕೋ ಅಂಥಂಥವನಾದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲರಂತಾದೆನು.
Kannada BSI Bible 2016
ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಲವಿಲ್ಲದವರನ್ನು ಸಂಪಾದಿಸುವದಕ್ಕೆ ಅವರಿಗೆ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥಂಥವನಾಗಿದ್ದೇನೆ.
Kannada Bible (KNCL) BSI 2016
ವಿಶ್ವಾಸದಲ್ಲಿ ದುರ್ಬಲರನ್ನು ಗಳಿಸಿಕೊಳ್ಳಲು ನಾನೂ ದುರ್ಬಲನಂತಾದೆ. ಹೇಗಾದರೂ ಸರಿ, ಕೆಲವರನ್ನಾದರೂ ಉದ್ಧರಿಸಲು ಎಲ್ಲರಿಗೂ ಎಲ್ಲವೂ ಆದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ಬಲವಿಲ್ಲದವರಿಗೆ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲವೂ ಆದೆನು.