1 Corinthians 9:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಓಟದ ಸ್ಪರ್ಧೆಯಲ್ಲಿ ಎಲ್ಲಾ ಓಟಗಾರರು ಓಡುತ್ತಾರೆಂಬುದು ನಿಮಗೆ ಗೊತ್ತಿದೆ. ಆದರೆ ಅವರಲ್ಲಿ ಒಬ್ಬನು ಮಾತ್ರ ಬಹುಮಾನವನ್ನು ಪಡೆದುಕೊಳ್ಳುತ್ತಾನೆ. ಆದ್ದರಿಂದ ಆ ರೀತಿಯಲ್ಲಿ ಓಡಿರಿ; ಗೆಲ್ಲುವುದಕ್ಕಾಗಿ ಓಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.
Kannada BSI Bible 2016
ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ರಂಗಸ್ಥಾನದಲ್ಲಿ ಓಡುವದಕ್ಕೆ ಗೊತ್ತಾದವರೆಲ್ಲರೂ ಓಡುತ್ತಾರಾದರೂ ಒಬ್ಬನು ಮಾತ್ರ ಬಿರುದನ್ನು ಹೊಂದುತ್ತಾನೆ ಎಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಿರುದನ್ನು ಪಡಕೊಳ್ಳಬೇಕೆಂತಲೇ ಓಡಿರಿ.
Kannada Bible (KNCL) BSI 2016
ನಿಮಗೆ ತಿಳಿದಿರುವಂತೆ ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಆದರೆ ಪ್ರಥಮ ಬಹುಮಾನ ದೊರಕುವುದು ಒಬ್ಬನಿಗೆ ಮಾತ್ರ. ಅಂತೆಯೇ ಬಹುಮಾನವನ್ನು ಪಡೆದುಕೊಳ್ಳಲು ನೀವೂ ಓಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಂದ್ಯಗಳಲ್ಲಿ ಎಲ್ಲರೂ ಓಡುತ್ತಾರೆ. ಆದರೆ ಒಬ್ಬನಿಗೆ ಮಾತ್ರ ಬಹುಮಾನ ದೊರೆಯುತ್ತದೆ ಎಂಬುದು ನಿಮಗೆ ತಿಳಿಯದೋ? ಬಹುಮಾನವನ್ನು ಪಡಕೊಳ್ಳಬೇಕೆಂದು ನೀವೂ ಓಡಿರಿ.