1 Corinthians 9:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಗುರಿಯನ್ನು ಹೊಂದಿರುವ ವ್ಯಕ್ತಿಯಂತೆ ಓಡುತ್ತೇನೆ. ಕೇವಲ ಗಾಳಿಯನ್ನು ಗುದ್ದದೆ, ನಿಜವಾಗಿಯೂ ಗುದ್ದಿ ಮುಷ್ಠಿಕಾಳಗ ಮಾಡುವ ವ್ಯಕ್ತಿಯಂತೆ ಹೋರಾಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ.
Kannada BSI Bible 2016
ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದಿರುವ ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದವನಾಗಿ ಗುದ್ದಾಡುತ್ತೇನೆ.
Kannada Bible (KNCL) BSI 2016
ನಾನಾದರೋ ಗೊತ್ತು ಗುರಿಯಿಲ್ಲದವನಂತೆ ಓಡುವುದಿಲ್ಲ, ಗಾಳಿಯೊಡನೆ ಗುದ್ದಾಡುವವನಂತೆ ಹೋರಾಡುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೊತ್ತುಗುರಿ ಇಲ್ಲದವನ ಹಾಗೆ ನಾನು ಓಡುವುದಿಲ್ಲ, ಗಾಳಿಯನ್ನು ಗುದ್ದುವವನ ಹಾಗೆ ನಾನು ಹೋರಾಡುವುದಿಲ್ಲ.