1 Corinthians 9:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಗುದ್ದುವುದು ನನ್ನ ಸ್ವಂತ ದೇಹವನ್ನೇ. ಇತರ ಜನರಿಗೆ ಬೋಧಿಸಿದ ಮೇಲೆ ಸ್ವತಃ ನಾನೇ ತಿರಸ್ಕೃತನಾಗದಂತೆ ಅದನ್ನು ನನ್ನ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.
Kannada BSI Bible 2016
ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇತರರನ್ನು ಹೋರಾಟಕ್ಕೆ ಕರೆದ ಮೇಲೆ ನಾನೇ ಅಯೋಗ್ಯನೆನಿಸಿಕೊಂಡೇನೋ ಎಂಬ ಭಯದಿಂದ ನನ್ನ ಮೈಯನ್ನು ಜಜ್ಜಿ ಸ್ವಾಧೀನ ಪಡಿಸಿಕೊಳ್ಳುತ್ತೇನೆ.
Kannada Bible (KNCL) BSI 2016
ಇತರರಿಗೆ ಕರೆಕೊಟ್ಟ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ, ನನ್ನನ್ನೇ ನಾನು ಹತೋಟಿಯಲ್ಲಿಟ್ಟುಕೊಳ್ಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಇತರರಿಗೆ ಸುವಾರ್ತೆ ಸಾರಿದ ಮೇಲೆ, ನಾನೇ ಬಹುಮಾನ ಹೊಂದಲು ಅಯೋಗ್ಯನಾಗದಂತೆ ನನ್ನ ದೇಹವನ್ನು ದಂಡಿಸಿ, ನನ್ನ ಸ್ವಾಧೀನದಲ್ಲಿಟ್ಟುಕೊಳ್ಳುತ್ತೇನೆ.