1 John 1:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ನೋಡಿದವುಗಳನ್ನೂ ಕೇಳಿದವುಗಳನ್ನೂ ಈಗ ನಿಮಗೆ ಹೇಳುತ್ತೇವೆ. ಏಕೆಂದರೆ ನೀವು ನಮ್ಮ ಅನ್ಯೋನ್ಯತೆಯಲ್ಲಿ ಪಾಲುಗಾರರಾಗಬೇಕೆಂಬುದು ನಮ್ಮ ಅಪೇಕ್ಷೆ. ನಮ್ಮ ಈ ಅನ್ಯೋನ್ಯತೆಯು ತಂದೆಯಾದ ದೇವರ ಮತ್ತು ಆತನ ಮಗನಾದ ಯೇಸು ಕ್ರಿಸ್ತನ ಸಂಗಡವಿರುವಂಥದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.
Kannada BSI Bible 2016
ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಕಂಡು ಕೇಳಿದ್ದು ನಿಮಗೂ ಗೊತ್ತಾಗಿ ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ಅದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದು.
Kannada Bible (KNCL) BSI 2016
ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು.