1 John 1:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ದೇವರಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಏನೆಂದರೆ, ದೇವರು ಬೆಳಕಾಗಿದ್ದಾನೆ; ಆತನಲ್ಲಿ ಅಂಧಕಾರವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ.
Kannada BSI Bible 2016
ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ.
Kannada Bible (KNCL) BSI 2016
ದೇವರೇ ಬೆಳಕು. ಅವರಲ್ಲಿ ಕತ್ತಲು ಎಂಬುದೇ ಇಲ್ಲ. ಅವರ ಪುತ್ರನಿಂದಲೇ ನಾವು ಕೇಳಿದ ಈ ಸಂದೇಶವನ್ನು ನಿಮಗೆ ಸಾರುತ್ತಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಕ್ರಿಸ್ತ ಯೇಸುವಿನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವುದೆಂದರೆ: ದೇವರು ಬೆಳಕಾಗಿದ್ದಾರೆ, ಅವರಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ, ಎಂಬುದೇ.