1 John 1:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ದೇವರ ಜೊತೆಯಲ್ಲಿ ಅನ್ಯೋನ್ಯತೆಯಿಂದ ಇದ್ದೇವೆ ಎಂದು ನಾವು ಹೇಳಿಕೊಂಡು, ಅಂಧಕಾರದಲ್ಲಿ ಜೀವಿಸುತ್ತಿದ್ದರೆ ಸುಳ್ಳು ಹೇಳಿದಂತಾಯಿತು. ಏಕೆಂದರೆ ನಾವು ಸತ್ಯವನ್ನು ಅನುಸರಿಸುತ್ತಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ.
Kannada BSI Bible 2016
ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ.
Kannada Bible (KNCL) BSI 2016
ನಾವು ಕತ್ತಲಲ್ಲಿ ಬಾಳುತ್ತಾ ದೇವರೊಡನೆ ಅನ್ಯೋನ್ಯವಾಗಿದ್ದೇವೆಂದು ಹೇಳಿದರೆ ನಾವು ಸುಳ್ಳುಗಾರರು, ಸತ್ಯಕ್ಕನುಸಾರ ಬಾಳದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೂ ಸುಳ್ಳಾಡುವವರಾಗಿದ್ದರೆ, ನಾವು ಸತ್ಯವನ್ನು ಅನುಸರಿಸುವವರಲ್ಲ.