1 John 2:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಪ್ರಿಯ ಮಕ್ಕಳೇ, ನೀವು ಪಾಪಗಳನ್ನು ಮಾಡದಿರಲೆಂದು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಆದರೆ ಯಾರಾದರೂ ಪಾಪವನ್ನು ಮಾಡಿದರೆ ನಮಗೆ ಸಹಾಯ ಮಾಡಲು ಯೇಸು ಕ್ರಿಸ್ತನಿದ್ದಾನೆ. ನೀತಿವಂತನಾಗಿರುವ ಆತನು ತಂದೆಯಾದ ದೇವರ ಬಳಿಯಲ್ಲಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.
Kannada BSI Bible 2016
ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪ್ರಿಯರಾದ ಮಕ್ಕಳೇ, ನೀವು ಪಾಪಮಾಡದಂತೆ ಈ ಮಾತುಗಳನ್ನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.
Kannada Bible (KNCL) BSI 2016
ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪ್ರಿಯ ಮಕ್ಕಳೇ, ನೀವು ಪಾಪಮಾಡದಂತೆ ಇವುಗಳನ್ನು ನಾನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತರಾದ ಕ್ರಿಸ್ತ ಯೇಸುವು ನಮ್ಮ ಪರವಾಗಿ ವಾದಿಸುವ ವಕೀಲರಾಗಿದ್ದಾರೆ.