1 John 2:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಅಂಧಕಾರದಲ್ಲಿದ್ದಾನೆ. ಅವನು ಅಂಧಕಾರದಲ್ಲಿಯೇ ಜೀವಿಸುತ್ತಾನೆ. ಅವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂಬುದೇ ತಿಳಿದಿಲ್ಲ. ಏಕೆಂದರೆ ಅಂಧಕಾರವು ಅವನನ್ನು ಕುರುಡನನ್ನಾಗಿ ಮಾಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು.
Kannada BSI Bible 2016
ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ, ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕಾಣದ ಹಾಗೆ ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಅವನಿಗೆ ತಿಳಿಯದು.
Kannada Bible (KNCL) BSI 2016
ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲಲ್ಲಿ ಇದ್ದಾನೆ; ಕತ್ತಲಲ್ಲೇ ನಡೆಯುತ್ತಾನೆ. ಕತ್ತಲು ಅವನನ್ನು ಕುರುಡಾಗಿಸಿರುವುದರಿಂದ ಎತ್ತ ಹೋಗುತ್ತಿದ್ದಾನೆಂದು ಅವನಿಗೇ ತಿಳಿಯದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ಜೀವಿಸುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.