1 John 2:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಲೋಕದಲ್ಲಿರುವ ಕೆಟ್ಟವುಗಳು ಇಂತಿವೆ: ನಮ್ಮ ಪಾಪಸ್ವಭಾವವನ್ನು ತಣಿಸಲು ಮಾಡಲಿಚ್ಛಿಸುವ ಕಾರ್ಯಗಳು. ನಾವು ನೋಡುವ ಪಾಪಪೂರಿತವಾದದ್ದನ್ನು ಪಡೆಯಲಿಚ್ಛಿಸುವುದು. ನಮ್ಮಲ್ಲಿರುವ ವಸ್ತುಗಳಲ್ಲಿಯೇ ದುರಹಂಕಾರಪಡುವುದು. ಆದರೆ ಇವುಗಳಲ್ಲಿ ಯಾವುದೂ ತಂದೆಯಿಂದ ಬರುವುದಿಲ್ಲ. ಇವುಗಳೆಲ್ಲ ಈ ಲೋಕದಿಂದ ಬರುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
Kannada BSI Bible 2016
ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೋಕದಲ್ಲಿರುವ ಶರೀರದಾಶೆ ಕಣ್ಣಿನಾಶೆ ಬದುಕುಬಾಳಿನ ಡಂಬ ಈ ಮೊದಲಾದವುಗಳೆಲ್ಲವು ತಂದೆಯಿಂದ ಹುಟ್ಟದೆ ಲೋಕದಿಂದ ಹುಟ್ಟಿದವುಗಳಾಗಿವೆ.
Kannada Bible (KNCL) BSI 2016
ಲೋಕಸಂಬಂಧವಾದ ದೈಹಿಕ ದುರಿಚ್ಛೆ, ಕಣ್ಣಿನ ಕಾಮುಕತೆ, ಐಶ್ವರ್ಯದ ಅಹಂಭಾವ - ಇಂಥವು ಪಿತನಿಂದ ಬಂದುವಲ್ಲ, ಲೋಕದಿಂದಲೇ ಬಂದುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಯಿಂದ ಬಂದವುಗಳಲ್ಲ, ಲೋಕದಿಂದ ಬಂದವುಗಳಾಗಿವೆ.