1 John 2:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಪ್ರಿಯ ಮಕ್ಕಳೇ, ಅಂತ್ಯವು ಸಮೀಪಿಸಿದೆ! ಕ್ರಿಸ್ತನ ಶತ್ರು ಬರುತ್ತಿದ್ದಾನೆಂಬುದನ್ನು ನೀವು ಕೇಳಿದ್ದೀರಿ. ಕ್ರಿಸ್ತನ ಅನೇಕ ಶತ್ರುಗಳು ಈಗಾಗಲೇ ಇಲ್ಲಿದ್ದಾರೆ. ಆದ್ದರಿಂದ ಅಂತ್ಯವು ಸಮೀಪಿಸಿದೆ ಎಂಬುದು ನಮಗೆ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ.
Kannada BSI Bible 2016
ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಕ್ಕಳಿರಾ, ಇದು ಕಡೇ ಗಳಿಗೆಯಾಗಿದೆ; ಕ್ರಿಸ್ತವಿರೋಧಿ ಬರುತ್ತಾನೆಂದು ನೀವು ಕೇಳಿದ್ದೀರಷ್ಟೆ; ಈಗಲೂ ಕ್ರಿಸ್ತವಿರೋಧಿಗಳು ಬಹುಮಂದಿ ಎದ್ದಿದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ತಿಳುಕೊಳ್ಳುತ್ತೇವೆ.
Kannada Bible (KNCL) BSI 2016
ನನ್ನ ಪ್ರಿಯ ಮಕ್ಕಳೇ, ಅಂತಿಮ ಕಾಲ ಸಮೀಪಿಸಿತು. ಕ್ರಿಸ್ತವಿರೋಧಿ ಬರುವನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳು ತಲೆದೋರಿದ್ದಾರೆ. ಇದರಿಂದ ಅಂತಿಮಕಾಲ ಸನ್ನಿಹಿತವಾಯಿತೆಂದು ನಮಗೆ ತಿಳಿದುಬರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳಿದ್ದಾರೆ. ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.