1 John 2:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮಗೆ ಏಕೆ ಬರೆಯಬೇಕು? ನೀವು ಸತ್ಯವನ್ನು ತಿಳಿದಿಲ್ಲವೆಂದು ನಾನು ಬರೆಯಬೇಕೇ? ಇಲ್ಲ! ನೀವು ಸತ್ಯವನ್ನು ತಿಳಿದಿರುವುದರಿಂದ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಸತ್ಯದಿಂದ ಯಾವ ಸುಳ್ಳೂ ಬರುವುದಿಲ್ಲ ಎಂಬುದು ನಿಮಗೆ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಸತ್ಯವನ್ನು ತಿಳಿಯದವರಲ್ಲ. ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವುದಿಲ್ಲವೆಂಬುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.
Kannada BSI Bible 2016
ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಸತ್ಯವನ್ನು ತಿಳಿಯದವರೆಂಬ ಭಾವನೆಯಿಂದಲ್ಲ, ನೀವು ಅದನ್ನು ತಿಳಿದಿರುವದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವದಿಲ್ಲವೆಂಬದನ್ನು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.
Kannada Bible (KNCL) BSI 2016
ನೀವು ಸತ್ಯವನ್ನು ಅರಿಯದವರೆಂದು ಭಾವಿಸಿ ನಾನು ಬರೆಯುತ್ತಿಲ್ಲ, ನೀವು ಸತ್ಯವನ್ನು ಅರಿತವರು; ಸತ್ಯದಿಂದ ಸುಳ್ಳು ಜನಿಸದೆಂಬುದನ್ನು ತಿಳಿದವರು. ಆದುದರಿಂದ ನಾನು ನಿಮಗೆ ಬರೆದಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಸತ್ಯವನ್ನು ತಿಳಿಯದವರೆಂದು ನಾನು ಭಾವಿಸುತ್ತಿಲ್ಲ, ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಬರುವುದಿಲ್ಲ ಎಂಬುವುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.