1 John 2:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಸುಳ್ಳು ಹೇಳುವವನು ಯಾರು? ಯೇಸುವನ್ನು ಕ್ರಿಸ್ತನಲ್ಲವೆಂದು ಹೇಳುವವನೇ ಸುಳ್ಳುಗಾರ. ಅವನು ಕ್ರಿಸ್ತನ ವೈರಿಯಾಗಿದ್ದಾನೆ. ಅವನು ತಂದೆಯನ್ನಾಗಲಿ (ದೇವರು), ಆತನ ಮಗನನ್ನಾಗಲಿ (ಕ್ರಿಸ್ತನು) ನಂಬುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುಳ್ಳುಗಾರನು ಯಾರು? ಯೇಸುವನ್ನು ಕ್ರಿಸ್ತನಲ್ಲ ಎಂದು ಅಲ್ಲಗಳೆಯುವವನು ಸುಳ್ಳುಗಾರನಾಗಿದ್ದಾಯೇ ಹೊರತು ಮತ್ತಾರು ಆಗಿರಲು ಸಾಧ್ಯ? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನು ಕ್ರಿಸ್ತವಿರೋಧಿಯಾಗಿದ್ದಾನೆ.
Kannada BSI Bible 2016
ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸುವು ಕ್ರಿಸ್ತನಲ್ಲ ಎನ್ನುವವನು ಸುಳ್ಳುಗಾರನಲ್ಲವಾದರೆ ಸುಳ್ಳುಗಾರನು ಬೇರೆ ಎಲ್ಲಿದ್ದಾನೆ? ಯಾವನಾದರೂ ತಾನು ತಂದೆಯನ್ನೂ ಮಗನನ್ನೂ ಅರಿಯೆನು ಎಂದು ಹೇಳಿದರೆ ಅವನೇ ಕ್ರಿಸ್ತ ವಿರೋಧಿ.
Kannada Bible (KNCL) BSI 2016
ಅಸತ್ಯವಾದಿ ಎಂದರೆ ಯಾರು? ಯೇಸುವೇ ಕ್ರಿಸ್ತ ಎಂಬುದನ್ನು ಯಾರು ಅಲ್ಲಗಳೆಯುತ್ತಾನೋ ಅವನೇ ಅಸತ್ಯವಾದಿ; ಅವನೇ ಕ್ರಿಸ್ತವಿರೋಧಿ. ಅವನು ಪಿತನನ್ನು ಮತ್ತು ಪುತ್ರನನ್ನು ತಿರಸ್ಕರಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಳ್ಳುಗಾರನು ಯಾರು? ಮನುಷ್ಯನಾಗಿ ಬಂದ ಯೇಸುವು ಕ್ರಿಸ್ತ ಅಲ್ಲ ಎಂದು ಯಾವನು ಅಲ್ಲಗಳೆಯುತ್ತಾನೋ ಅವನೇ ಸುಳ್ಳುಗಾರನು. ಅವನೇ ತಂದೆಯನ್ನೂ ಮಗನನ್ನೂ ಅಲ್ಲಗಳೆಯುವ ಕ್ರಿಸ್ತವಿರೋಧಿಯಾಗಿದ್ದಾನೆ.