1 John 2:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕ್ರಿಸ್ತನು ನಿಮಗೆ ವಿಶೇಷವಾದ ವರವನ್ನು ದಯಪಾಲಿಸಿರುವನು. ಅದು ನಿಮ್ಮಲ್ಲಿ ಇನ್ನೂ ಇದೆ. ಆದ್ದರಿಂದ ನಿಮಗೆ ಯಾವ ಉಪದೇಶಕರ ಅಗತ್ಯವೂ ಇಲ್ಲ. ಆತನು ನಿಮಗೆ ಕೊಟ್ಟಿರುವ ವರವು ನಿಮಗೆ ಎಲ್ಲವನ್ನೂ ಉಪದೇಶಿಸುತ್ತದೆ. ಅದು ನಿಜವಾದುದು, ಸುಳ್ಳಲ್ಲ. ಆದ್ದರಿಂದ ಅದರ ಉಪದೇಶಕ್ಕನುಸಾರವಾಗಿ ನೀವು ಆತನಲ್ಲಿ ನೆಲೆಗೊಂಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.
Kannada BSI Bible 2016
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶ ಮಾಡುವದು ಅವಶ್ಯವಿಲ್ಲ. ಆತನು ಮಾಡಿದ ಅಭಿಷೇಕವು ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥದಾಗಿದ್ದು ಸತ್ಯವಾಗಿದೆ, ಸುಳ್ಳಲ್ಲ. ಅದು ನಿಮಗೆ ಉಪದೇಶ ಮಾಡಿದ ಪ್ರಕಾರ ಆತನಲ್ಲಿ ನೆಲೆಗೊಂಡಿರ್ರಿ.
Kannada Bible (KNCL) BSI 2016
ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕ್ರಿಸ್ತ ಯೇಸುವಿನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುತ್ತದೆ. ಆದುದರಿಂದ ಬೇರೆ ಯಾರೂ ನಿಮಗೆ ಬೋಧಿಸುವ ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಬೋಧಿಸುವುದು. ಆ ಬೋಧನೆಯು ಸುಳ್ಳಲ್ಲ, ಸತ್ಯವಾದದ್ದು. ಆದ್ದರಿಂದ ಅದು ನಿಮಗೆ ಬೋಧಿಸಿದ ಪ್ರಕಾರವೇ, ಕ್ರಿಸ್ತ ಯೇಸುವಿನಲ್ಲಿ ನೀವು ನೆಲೆಗೊಳ್ಳಿರಿ.