1 John 2:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೌದು, ನನ್ನ ಪ್ರಿಯ ಮಕ್ಕಳೇ, ಆತನಲ್ಲಿಯೇ ನೆಲೆಗೊಂಡಿರೋಣ. ನಾವು ಹೀಗೆ ಮಾಡಿದರೆ, ಕ್ರಿಸ್ತನು ಮರಳಿ ಬರುವ ದಿನದಂದು ನಾವು ಭಯಪಡಬೇಕಾಗಿಲ್ಲ; ಅಡಗಿಕೊಳ್ಳುವ ಅಗತ್ಯವಿರುವುದಿಲ್ಲ; ನಾಚಿಕೆಪಡುವ ಅಗತ್ಯವೂ ಇರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.
Kannada BSI Bible 2016
ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಿಯರಾದ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.
Kannada Bible (KNCL) BSI 2016
ಹೌದು ಪ್ರಿಯ ಮಕ್ಕಳೇ, ಕ್ರಿಸ್ತಯೇಸು ಪ್ರತ್ಯಕ್ಷರಾಗುವಾಗ, ಅವರ ಪುನರಾಗಮನದ ಪ್ರಯುಕ್ತ ಅವರ ಮುಂದೆ ನಾವು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಂಡಿರೋಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯ ಮಕ್ಕಳೇ, ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನೀವು ಅವರ ಆಗಮನದಲ್ಲಿ ಅವರ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಳ್ಳಿರಿ.