1 John 2:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದೇವರನ್ನು ನಾನು ಬಲ್ಲೆನು” ಎಂದು ಹೇಳುವವನು ದೇವರ ಆಜ್ಞೆಗಳಿಗೆ ವಿಧೇಯನಾಗಿರದಿದ್ದರೆ, ಅವನು ಸುಳ್ಳುಗಾರನಾಗಿದ್ದಾನೆ. ಅವನಲ್ಲಿ ಸತ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ.
Kannada BSI Bible 2016
ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದೆ ನಡೆಯುವವನು ಸುಳ್ಳುಗಾರನಾಗಿದ್ದಾನೆ; ಸತ್ಯವೆಂಬದು ಅವನಲ್ಲಿ ಇಲ್ಲ.
Kannada Bible (KNCL) BSI 2016
ದೇವರನ್ನು ಬಲ್ಲೆನೆಂದು ಹೇಳಿಕೊಳ್ಳುತ್ತಾ ಅವರ ಆಜ್ಞೆಗಳನ್ನು ಕೈಗೊಳ್ಳದೆ ಇರುವವನು ಸುಳ್ಳುಗಾರ ಮತ್ತು ಸತ್ಯವೆಂಬುದೇ ಅವನಲ್ಲಿ ಇರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು, “ನಾನು ಅವರನ್ನು ಬಲ್ಲೆನು,” ಎಂದು ಹೇಳಿ ಅವರ ಆಜ್ಞೆಗಳನ್ನು ಕೈಗೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವು ಅವನಲ್ಲಿ ಇಲ್ಲ.