1 John 2:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯಾವನಾದರೂ ದೇವರ ವಾಕ್ಯಕ್ಕೆ ವಿಧೇಯನಾಗಿದ್ದರೆ, ದೇವರ ಮೇಲೆ ಅವನಿಗಿರುವ ಪ್ರೀತಿಯು ಪರಿಪೂರ್ಣವಾಗಿದೆ. ನಾವು ದೇವರನ್ನು ಅನುಸರಿಸುತ್ತಿದ್ದೇವೆ ಎಂಬುದನ್ನು ಇದರಿಂದಲೇ ತಿಳಿದುಕೊಳ್ಳುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
Kannada BSI Bible 2016
ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ಆತನಲ್ಲಿದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
Kannada Bible (KNCL) BSI 2016
ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬಂದಿರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವನಾದರೂ ದೇವರ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ದೇವರಲ್ಲಿದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.