1 John 2:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಈ ಆಜ್ಞೆಯನ್ನು ನಾನು ನಿಮಗೆ ಹೊಸ ಆಜ್ಞೆಯೋ ಎಂಬಂತೆ ಬರೆಯುತ್ತಿದ್ದೇನೆ. ಈ ಆಜ್ಞೆಯು ಸತ್ಯವಾದದ್ದು. ಅದರ ಸತ್ಯತೆಯನ್ನು ನೀವು ಯೇಸುವಿನಲ್ಲಿಯೂ ನಿಮ್ಮಲ್ಲಿಯೂ ಕಾಣಬಹುದು. ಕತ್ತಲೆಯು ಕಳೆದುಹೋಗುತ್ತಿದೆ ಮತ್ತು ನಿಜವಾದ ಬೆಳಕು ಈಗಾಗಲೇ ಪ್ರಕಾಶಿಸುತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
Kannada BSI Bible 2016
ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಹೇಗಂದರೆ ಕತ್ತಲೆಯು ಕಳೆದುಹೋಗುತ್ತದೆ, ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
Kannada Bible (KNCL) BSI 2016
ಆದರೂ ನಾನೀಗ ನಿಮಗೆ ಬರೆಯುತ್ತಿರುವುದು ಒಂದು ವಿಧದಲ್ಲಿ ಹೊಸ ಆಜ್ಞೆಯೇ ಸರಿ. ಅದರ ನೈಜಗುಣವು ಕ್ರಿಸ್ತಯೇಸುವಿನಲ್ಲಿ ಬೆಳಗಿದಂತೆ, ನಿಮ್ಮ ಜೀವನದಲ್ಲೂ ಬೆಳಗುತ್ತದೆ. ಏಕೆಂದರೆ, ಕತ್ತಲು ಕಳೆದುಹೋಗುತ್ತಿದೆ; ನಿಜವಾದ ಬೆಳಕು ಈಗಾಗಲೇ ಪ್ರಕಾಶಿಸುತ್ತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಿರುಗಿ ನಾನು ನಿಮಗೆ ಬರೆಯುವುದು ಹೊಸ ಅಪ್ಪಣೆಯೇ. ಇದು ಕ್ರಿಸ್ತ ಯೇಸುವಿನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ಸತ್ಯವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.