1 John 3:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಕಾಯಿನನಂತಿರಬೇಡಿ. ಅವನು ಕೆಡುಕನಿಗೆ ಸೇರಿದವನಾಗಿದ್ದನು. ಅವನು ತನ್ನ ತಮ್ಮನನ್ನು (ಹೇಬೆಲ) ಕೊಂದುಹಾಕಿದನು. ಅವನು ತನ್ನ ತಮ್ಮನನ್ನು ಕೊಂದದ್ದೇಕೆ? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ಒಳ್ಳೆಯವುಗಳೂ ಆಗಿದ್ದರಿಂದಲೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ.
Kannada BSI Bible 2016
ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಡುಕನಿಂದ ಹುಟ್ಟಿ ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಯಾವ ಕಾರಣದಿಂದ ಅವನನ್ನು ಕೊಂದುಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಗೆ ಸರಿಯಾದವುಗಳೂ ಆಗಿದ್ದದರಿಂದಲೇ.
Kannada Bible (KNCL) BSI 2016
ತನ್ನ ಸಹೋದರನನ್ನೇ ಕೊಂದ ಕಾಯಿನನಂತೆ ನಾವು ಇರಬಾರದು. ಅವನು ಕಡುಕೇಡಿಗನ ಕುವರ. ಅವನು ಕೊಂದುದಾದರೂ ಏಕೆ? ತನ್ನ ಕೃತ್ಯಗಳು ದುಷ್ಟವಾಗಿದ್ದು ತನ್ನ ಸಹೋದರನ ಕೃತ್ಯಗಳು ಧರ್ಮಿಷ್ಠವಾಗಿದ್ದುದರಿಂದ ಅಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಡುಕನಾಗಿದ್ದ ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ಅಲ್ಲ. ಅವನು ಯಾವ ಕಾರಣದಿಂದ ತಮ್ಮನನ್ನು ಕೊಂದುಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ ಅಲ್ಲವೇ?