1 John 3:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಮರಣವನ್ನು (ಪಾಪಗಳನ್ನು) ತೊರೆದು ಜೀವಕ್ಕೆ ಬಂದಿದ್ದೇವೆ ಎಂಬುದು ನಮಗೆ ಗೊತ್ತಿದೆ. ಕ್ರಿಸ್ತನಲ್ಲಿ ನಮ್ಮ ಸಹೋದರ ಸಹೋದರಿಯರನ್ನು ನಾವು ಪ್ರೀತಿಸುತ್ತಿರುವುದರಿಂದಲೇ ಇದನ್ನು ತಿಳಿದುಕೊಂಡಿದ್ದೇನೆ. ಪ್ರೀತಿಸದಿರುವ ವ್ಯಕ್ತಿಯು ಇನ್ನೂ ಮರಣದಲ್ಲಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
Kannada BSI Bible 2016
ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
Kannada Bible (KNCL) BSI 2016
ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.