1 John 3:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ನಿಜವಾದ ಪ್ರೀತಿಯೆಂದರೇನೆಂಬುದನ್ನು ನಾವು ತಿಳಿದುಕೊಂಡೆವು. ಆದ್ದರಿಂದ ಕ್ರಿಸ್ತನಲ್ಲಿ ಸಹೋದರ ಸಹೋದರಿಯರಾದವರಿಗೋಸ್ಕರ ನಾವೂ ನಮ್ಮ ಪ್ರಾಣಗಳನ್ನು ಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
Kannada BSI Bible 2016
ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದರಲ್ಲಿಯೇ ಪ್ರೀತಿ ಇಂಥದೆಂದು ನಮಗೆ ತಿಳಿದು ಬಂದದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
Kannada Bible (KNCL) BSI 2016
ಕ್ರಿಸ್ತಯೇಸು ನಮಗೋಸ್ಕರ ತಮ್ಮ ಪ್ರಾಣವನ್ನೇ ತೆತ್ತರು. ಇದರಿಂದ ಪ್ರೀತಿ ಎಂತಹುದೆಂದು ನಾವು ಅರಿತುಕೊಂಡೆವು. ನಾವೂ ಕೂಡ ಸಹೋದರರಿಗಾಗಿ ಪ್ರಾಣಾರ್ಪಣೆ ಮಾಡಲು ಬದ್ಧರಾಗಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರ ಸಹೋದರಿಯರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವವರಾಗಿದ್ದೇವೆ.