1 John 3:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಸತ್ಯಮಾರ್ಗಕ್ಕೆ ಸೇರಿದವರೆಂಬುದನ್ನು ಈ ಮೂಲಕವಾಗಿಯೇ ತಿಳಿದುಕೊಳ್ಳುತ್ತೇವೆ. ನಮ್ಮ ಮನ ಸ್ಸಾಕ್ಷಿಯು ನಮ್ಮನ್ನು ತಪ್ಪಿತಸ್ಥರೆಂದು ಹೇಳಿದರೂ ನಾವು ದೇವರ ಎದುರಿನಲ್ಲಿ ಸಮಾಧಾನದಿಂದಿರಲು ಸಾಧ್ಯ. ಏಕೆಂದರೆ ನಮ್ಮ ಮನಸ್ಸಾಕ್ಷಿಗಿಂತ ದೇವರೇ ದೊಡ್ಡವನು. ಆತನಿಗೆ ಎಲ್ಲವೂ ತಿಳಿದಿದೆ. (Verses 19-20)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ.
Kannada BSI Bible 2016
ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಸತ್ಯಕ್ಕೆ ಸೇರಿದವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ.
Kannada Bible (KNCL) BSI 2016
ಹೀಗೆ ನಾವು ಸತ್ಯಕ್ಕೆ ಸೇರಿದವರು ಎಂಬುದು ಮನದಟ್ಟಾಗುವುದಲ್ಲದೆ ದೇವರ ಮುಂದೆ ನಮ್ಮ ಮನಸ್ಸು ನೆಮ್ಮದಿಯಿಂದಿರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಸಮಕ್ಷಮದಲ್ಲಿ ನಾವು ನಮ್ಮ ಹೃದಯವನ್ನು ವಿಶ್ರಾಂತಿಗೊಳಿಸಿರುವುದರಿಂದ ನಾವು ಸತ್ಯಕ್ಕೆ ಸೇರಿದವರು ಎಂಬುದು ಇದರಿಂದಲೇ ನಮಗೆ ತಿಳಿಯುತ್ತದೆ: