1 John 3:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 19
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ನಮ್ಮ ಹೃದಯವು ಯಾವ ವಿಷಯದಲ್ಲಾದರು ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೆ, ದೇವರು ನಮ್ಮ ಹೃದಯವನ್ನು ಬಲ್ಲವನಾಗಿರುವುದರಿಂದ ನಮ್ಮ ಹೃದಯವನ್ನು ಆತನಲ್ಲಿ ದೃಢಪಡಿಸಬಹುದು.
Kannada BSI Bible 2016
ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನಮ್ಮ ಹೃದಯವು ಯಾವ ವಿಷಯದಲ್ಲಿಯಾದರೂ ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೂ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವನಾಗಿದ್ದಾನೆಂದು ನಾವು ತಿಳಿದು ದೇವರ ಸಮಕ್ಷಮದಲ್ಲಿ ನಮ್ಮ ಹೃದಯವನ್ನು ಸಮಾಧಾನಪಡಿಸುವೆವು.
Kannada Bible (KNCL) BSI 2016
ಯಾವ ವಿಷಯದಲ್ಲಾದರೂ ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸಿದ್ದೇ ಆದರೆ ಎಲ್ಲವನ್ನೂ ಬಲ್ಲ ದೇವರು ನಮ್ಮ ಮನಸ್ಸಾಕ್ಷಿಗಿಂತಲೂ ದೊಡ್ಡವರೆಂಬುದು ನಮಗೆ ತಿಳಿದೇ ಇರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸುವಾಗಲೆಲ್ಲಾ, ನಮ್ಮ ಹೃದಯಕ್ಕಿಂತ ದೇವರು ದೊಡ್ಡವರಾಗಿದ್ದಾರೆಂತಲೂ ದೇವರು ಎಲ್ಲವನ್ನೂ ಬಲ್ಲವರಾಗಿದ್ದಾರೆಂತಲೂ ತಿಳಿದುಕೊಳ್ಳಿರಿ.