1 John 3:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರ ಆಜ್ಞೆ ಏನೆಂದರೆ ಆತನ ಮಗನಾದ ಯೇಸು ಕ್ರಿಸ್ತನಲ್ಲಿ ನಾವು ನಂಬಿಕೆಯಿಟ್ಟು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.
Kannada BSI Bible 2016
ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಆಜ್ಞೆ ಯಾವದಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಕ್ರಿಸ್ತನು ನಮಗೆ ಅಪ್ಪಣೆ ಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.
Kannada Bible (KNCL) BSI 2016
ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ದೇವರ ಆಜ್ಞೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ದೇವರ ಪುತ್ರ ಆಗಿರುವ ಯೇಸುಕ್ರಿಸ್ತರ ಹೆಸರನ್ನು ನಂಬಿ, ಅವರು ನಮಗೆ ಆಜ್ಞಾಪಿಸಿದ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ದೇವರ ಆಜ್ಞೆಯಾಗಿರುತ್ತದೆ.