1 John 3:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರ ಆಜ್ಞೆಗಳಿಗೆ ವಿಧೇಯನಾಗಿರುವವನು ದೇವರಲ್ಲಿ ನೆಲೆಸಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಸಿರುತ್ತಾನೆ. ದೇವರು ನಮ್ಮಲ್ಲಿ ನೆಲೆಸಿದ್ದಾನೆ ಎಂಬುದು ನಮಗೆ ಹೇಗೆ ತಿಳಿದದೆ? ದೇವರು ನಮಗೆ ದಯಪಾಲಿಸಿರುವ ಪವಿತ್ರಾತ್ಮನಿಂದಲೇ ನಮಗೆ ತಿಳಿದದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಗೊಂಡಿರುತ್ತಾನೆ. ಆತನು ಅವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಲ್ಲವರಾಗಿದ್ದೇವೆ.
Kannada BSI Bible 2016
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ, ಆತನು ಇವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ಬಲ್ಲೆವು.
Kannada Bible (KNCL) BSI 2016
ದೇವರ ಆಜ್ಞೆಯನ್ನು ಪಾಲಿಸುವವನು ಅವರಲ್ಲಿ ನೆಲೆಸಿರುತ್ತಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ. ದೇವರು ನಮ್ಮಲ್ಲಿ ನೆಲೆಸಿದ್ದಾರೆಂದು ಅವರು ದಯಪಾಲಿಸುವ ಪವಿತ್ರಾತ್ಮರಿಂದಲೇ ತಿಳಿದುಕೊಳ್ಳುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವವನು ದೇವರಲ್ಲಿ ವಾಸಮಾಡುತ್ತಾನೆ ಮತ್ತು ದೇವರು ಅವನಲ್ಲಿ ವಾಸಮಾಡುತ್ತಾರೆ. ದೇವರು ನಮ್ಮಲ್ಲಿ ವಾಸಮಾಡುತ್ತಾರೆಂದು ದೇವರು ನಮಗೆ ದಯಪಾಲಿಸಿದ ಆತ್ಮನಿಂದಲೇ ನಾವು ಬಲ್ಲೆವು.