1 John 3:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಾಪ ಮಾಡುವವನು ದೇವರ ಕಟ್ಟಳೆಗಳನ್ನು ಉಲ್ಲಂಘಿಸುವವನಾಗಿದ್ದಾನೆ. ಹೌದು, ಪಾಪಮಾಡುವುದಕ್ಕೂ ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ಜೀವಿಸುವುದಕ್ಕೂ ಯಾವ ವ್ಯತ್ಯಾಸವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾಪಮಾಡುವ ಪ್ರತಿಯೊಬ್ಬನೂ ಅಧರ್ಮವನ್ನು ಮಾಡುವವನಾಗಿದ್ದಾನೆ; ಪಾಪವು ಅಧರ್ಮವೇ.
Kannada BSI Bible 2016
ಪಾಪಮಾಡುವವನು ನ್ಯಾಯಪ್ರಮಾಣವನ್ನು ವಿಾರುವವನಾಗಿದ್ದಾನೆ; ಯಾಕಂದರೆ ನ್ಯಾಯ ಪ್ರಮಾಣವನ್ನು ವಿಾರುವದೇ ಪಾಪ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾಪಮಾಡುವ ಪ್ರತಿಯೊಬ್ಬನು ಅಧರ್ಮವನ್ನು ಮಾಡುವವನಾಗಿದ್ದಾನೆ; ಪಾಪವು ಅಧರ್ಮವೇ.
Kannada Bible (KNCL) BSI 2016
ಪಾಪಮಾಡುವ ಪ್ರತಿಯೊಬ್ಬನೂ ದೇವರ ಆಜ್ಞೆಯನ್ನು ಮೀರುತ್ತಾನೆ. ದೇವರ ಆಜ್ಞೆಯನ್ನು ಉಲ್ಲಂಘಿಸುವುದೇ ಪಾಪ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಾಪಮಾಡುವ ಪ್ರತಿಯೊಬ್ಬನೂ ನಿಯಮವನ್ನು ಮೀರುವವನಾಗಿದ್ದಾನೆ. ನಿಯಮವನ್ನು ಮೀರುವುದೇ ಪಾಪ.
Recommended Reading