1 John 4:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಿರಲಾಗಿ ನಮ್ಮ ಮೇಲೆ ದೇವರಿಗಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ನಾವು ಆ ಪ್ರೀತಿಯಲ್ಲಿ ಭರವಸವಿಟ್ಟಿದ್ದೇವೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
Kannada BSI Bible 2016
ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ; ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
Kannada Bible (KNCL) BSI 2016
ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನಮ್ಮನ್ನು ಪ್ರೀತಿಸುತ್ತಾರೆಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾರೆ, ಪ್ರೀತಿಯಲ್ಲಿ ಬಾಳುವವರು ದೇವರಲ್ಲಿ ಬಾಳುವವರಾಗಿದ್ದಾರೆ, ದೇವರು ಅವರಲ್ಲಿ ಬಾಳುವವರಾಗಿದ್ದಾರೆ.