1 John 4:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರ ಪ್ರೀತಿಯು ಎಲ್ಲಿರುವುದೋ ಅಲ್ಲಿ ಭಯವಿರುವುದಿಲ್ಲ. ಏಕೆಂದರೆ ದೇವರ ಪರಿಪೂರ್ಣ ಪ್ರೀತಿಯು ಭಯವನ್ನು ತೆಗೆದುಹಾಕುತ್ತದೆ. ದೇವರ ದಂಡನೆಯೇ ಒಬ್ಬ ವ್ಯಕ್ತಿಯಲ್ಲಿ ಭಯವನ್ನು ಉಂಟುಮಾಡುವಂಥದ್ದು. ಆದ್ದರಿಂದ ಭಯವಿರುವವನಲ್ಲಿ ದೇವರ ಪ್ರೀತಿ ಪರಿಪೂರ್ಣವಾಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.
Kannada BSI Bible 2016
ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರೀತಿಯು ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯು ಯಾತನೆಯನ್ನು ಹೊಂದುತ್ತಾ ಇರುವದು; ಪೂರ್ಣಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.
Kannada Bible (KNCL) BSI 2016
ಪ್ರೀತಿ ಇರುವಲ್ಲಿ ಭೀತಿ ಇರುವುದಿಲ್ಲ. ಪೂರ್ಣ ಪ್ರೀತಿ ಭೀತಿಯನ್ನು ಹೊರದೂಡುತ್ತದೆ. ಭೀತಿ ಇರುವಲ್ಲಿ ಯಾತನೆ ಇರುತ್ತದೆ. ಭೀತಿಯಿಂದಿರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರೀತಿಯಲ್ಲಿ ಹೆದರಿಕೆಯಿಲ್ಲ ಆದರೆ ಪೂರ್ಣ ಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಏಕೆಂದರೆ ಭಯವಿರುವಲ್ಲಿ ಯಾತನೆಯಿರುವುದು. ಭಯಪಡುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.