1 John 4:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವ ರಾತ್ಮವನ್ನು ನೀವು ಇದೇ ರೀತಿ ತಿಳಿದುಕೊಳ್ಳಲು ಸಾಧ್ಯ. “ಈ ಲೋಕಕ್ಕೆ ಮನುಷ್ಯನಾಗಿ ಬಂದ ಯೇಸುವೇ ಕ್ರಿಸ್ತನೆಂದು ನಾನು ನಂಬುತ್ತೇನೆ” ಎಂದು ಹೇಳುವ ಆತ್ಮವು ದೇವರಿಂದ ಬಂದದ್ದಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರಾತ್ಮ ಪ್ರೇರಿತವಾದ ನುಡಿಗಳು ಎಂದು ತಿಳಿದುಕೊಳ್ಳುವುದು ಹೇಗೆಂದರೆ, ಯೇಸು ಕ್ರಿಸ್ತನು ಮನುಷ್ಯ ರೂಪವನ್ನು ಧರಿಸಿಕೊಂಡು ಬಂದನು ಎಂದು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾಗಿ ಬಂದದ್ದಾಗಿದೆ.
Kannada BSI Bible 2016
ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರೇರಿಸುವಂಥವನು ದೇವರ ಆತ್ಮನೇ ಎಂದು ತಿಳಿದುಕೊಳ್ಳುವದಕ್ಕೆ ಲಕ್ಷಣವೇನಂದರೆ - ಮನುಷ್ಯನಾಗಿ ಬಂದ ಯೇಸು ಕ್ರಿಸ್ತನನ್ನು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾದದ್ದು.
Kannada Bible (KNCL) BSI 2016
ದೇವರ ಆತ್ಮದಿಂದ ಬಂದ ಪ್ರೇರಣೆಯನ್ನು ನೀವು ಹೀಗೆ ಗುರುತಿಸಬಹುದು; ಮನುಷ್ಯ ಆಗಿ ಬಂದ ಕ್ರಿಸ್ತಯೇಸುವನ್ನು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ದೇವರಾತ್ಮನನ್ನು ಹೀಗೆ ಗುರುತಿಸಬಹುದು: ಕ್ರಿಸ್ತ ಯೇಸು ನರಮಾಂಸರಾಗಿ ಬಂದರೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದು.