1 John 4:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿಕೊಳ್ಳುವವನು ತನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ದ್ವೇಷಿಸಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಅವನು ತನ್ನ ಸಹೋದರನನ್ನು ಕಣ್ಣಾರೆ ನೋಡುತ್ತಿದ್ದರೂ ಅವನನ್ನು ದ್ವೇಷಿಸುತ್ತಾನೆ. ಆದ್ದರಿಂದ ಅವನು ದೇವರನ್ನು ಪ್ರೀತಿಸಲಾಗುವುದಿಲ್ಲ. ಏಕೆಂದರೆ ಅವನು ದೇವರನ್ನು ಎಂದೂ ನೋಡಿಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?
Kannada BSI Bible 2016
ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ತಾನು ದೇವರನ್ನು ಪ್ರೀತಿಸುತ್ತೇನೆಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಪ್ರೀತಿಸಲಾರನು.
Kannada Bible (KNCL) BSI 2016
ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು, “ನಾನು ದೇವರನ್ನು ಪ್ರೀತಿಸುತ್ತೇನೆ,” ಎಂದು ಹೇಳಿ ತನ್ನ ಸಹೋದರರನ್ನು ದ್ವೇಷ ಮಾಡಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು, ಕಾಣದಿರುವ ದೇವರನ್ನು ಪ್ರೀತಿಸಲಾರನು.